Hampi Utsav 2024

ವಿಶ್ವವಿಖ್ಯಾತ ಹಂಪಿ ಉತ್ಸವ 2024ರ ಫೆ.2ರಿಂದ ಮೂರು ದಿನ ನಡೆಯಲಿದ್ದು, ಫೆ.2ರಿಂದ ಉತ್ಸವ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದು, ಉದ್ಘಾಟನೆ ನೆರವೇರಿಸಲು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸಚಿವರು ಮಾಹಿತಿ ನೀಡಿದ್ದಾರೆ. ಉತ್ಸವವನ್ನು ಅದ್ಧೂರಿಯಾಗಿ ನಡೆಸುವುದರ ಜೊತೆಗೆ ಸ್ಥಳೀಯ ಕಲಾವಿದರು ಮತ್ತು ಸಾಂಸ್ಕೃತಿಕ ಕಲೆಗಳಿಗೆ ಅವಕಾಶ ಕಲ್ಪಿಸಲು ಸೂಚನೆಗಳನ್ನು ನೀಡಲಾಗಿದೆ.


ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಮಾಡಲು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ. ಉತ್ಸವಕ್ಕೆ ಸಂಬಂಧಿಸಿದಂತೆ ಶಾಸಕರು ಸೇರಿದಂತೆ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಸಚಿವರು ಹೇಳಿದ್ದಾರೆ.

Leave a Reply