Yuvanidhi Registration in Bellary

yuvanidhi registration in bellary

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ.

ಎಲ್ಲಿ ರಿಜಿಸ್ಟ್ರಿ ಮಾಡಿಸಬೇಕು ( where to Register):

  • ಅರ್ಹರು ಸೇವಾ ಸಿಂಧು ಪೋರ್ಟಲ್,
  • ಅಟಲ್ ಜೀ ಕೇಂದ್ರ,
  • ಕರ್ನಾಟಕ-1,
  • ಬಳ್ಳಾರಿ-1.
  • ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

ಅರ್ಹರು (Eligibility):

  • 2023ರಲ್ಲಿ ಪದವಿ (Degree), ಡಿಪ್ಲೋಮಾ (Diploma) ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
  • ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು.
  • ಸ್ವಯಂ ಉದ್ಯೋಗ ಹೊಂದಿರಬಾರದು.
  • ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು.
  • ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು.

ದಾಖಲೆಗಳು (Documents):

  • ಎಸ್.ಎಸ್.ಎಲ್.ಸಿ (SSLC)., ಪಿಯುಸಿ(PUC), ಪದವಿ(Degree) ಅಥವಾ ಡಿಪ್ಲೋಮಾ(Diploma) ಪ್ರಮಾಣ ಪತ್ರ(Certificates).
  • ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಥವಾ ದೂ.08392-294230 or 08392-273988 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply